ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ.
ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ ಭೀಮನಗೌಡ ಬೀರಾದಾರ್ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ.

ದೇವರ ನಿಂಬರಗಿ ಗ್ರಾಮದ ಹೇರ್‌ ಕಟಿಂಗ್ ಶಾಪ್​ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ನಡೆಸಿದ್ದು, ಆರೋಪಿಗಳು ಭೀಮನಗೌಡಗೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈತ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಎಂದು ಹೇಳಲಾಗಿದೆ. ಮೂರರಿಂದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗುಂಡು ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement