ಪಕ್ಷ ಅಮಾನತು ಮಾಡಿದ ನಂತರ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿ ತಂದೆಯ ಪಕ್ಷವನ್ನೇ ತೊರೆದ ಮಗಳು…!

ಹೈದರಾಬಾದ್‌ : ಭಾರತ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಅಮಾನತುಗೊಂಡ ನಂತರ ಕೆ. ಕವಿತಾ ಇಂದು, ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಅವರು ಇದೇ ವೇಳೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಕವಿತಾ ಅವರು ಭಾರತ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಮಗಳು. ತಮ್ಮನ್ನು ಬಿಆರ್​ಎಸ್ ಪಕ್ಷದಿಂದ ಅಮಾನತು ಮಾಡಿದ ಕ್ರಮದಿಂದ ಬಹಳ ನೋವಾಗಿದೆ ಎಂದು ಕವಿತಾ ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಸಭಾಪತಿಗಳು ಹಾಗೂ ಬಿಆರ್‌ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಅವರಿಗೆ ಕಳುಹಿಸುತ್ತಿದ್ದೇನೆ ಎಂದು ಹೇಳಿರುವ ಕವಿತಾ, ತಾನು ಯಾವುದೇ ಪಕ್ಷದೊಂದಿಗೆ ಹೋಗುತ್ತಿಲ್ಲ. ತೆಲಂಗಾಣ ಜಾಗೃತಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

ಬಿಆರ್‌ಎಸ್‌ನಲ್ಲಿ ಆಂತರಿಕ ಬಿರುಕು
ತೆಲಂಗಾಣದ ಮಾಜಿ ಮುಖ್ಯಮಂತ್ರಿಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರ ಪುತ್ರಿ ಕೆ ಕವಿತಾ ಅವರನ್ನು ಮಂಗಳವಾರ “ಪಕ್ಷ ವಿರೋಧಿ ಚಟುವಟಿಕೆಗಳು” ಆರೋಪದ ಮೇಲೆ ಬಿಆರ್‌ಎಸ್‌ನಿಂದ ಅಮಾನತು ಮಾಡಲಾಯಿತು. ಕವಿತಾ ತಮ್ಮ ಸೋದರಸಂಬಂಧಿಗಳಾದ ಟಿ ಹರೀಶ ರಾವ್ ಮತ್ತು ಜೆ ಸಂತೋಷಕುಮಾರಅವರು “ಆಸ್ತಿಗಳನ್ನು ಮಾಡಿದ್ದಾರೆ” ಮತ್ತು ಪ್ರಸ್ತುತ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ ರೆಡ್ಡಿ ಅವರೊಂದಿಗೆ “ಗುಪ್ತ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಬಹಿರಂಗವಾಗಿ ಆರೋಪ ಮಾಡಿದ್ದರು.
ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ ರಾವ್ ಅವರು ಕೆ ಕವಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪಕ್ಷದ ಎಂಎಲ್‌ಸಿ ಕೆ ಕವಿತಾ ಅವರ ಇತ್ತೀಚಿನ ನಡವಳಿಕೆ ಮತ್ತು ನಡೆಯುತ್ತಿರುವ ಪಕ್ಷ ವಿರೋಧಿ ಚಟುವಟಿಕೆಗಳು ಪಕ್ಷಕ್ಕೆ ಹಾನಿ ಮಾಡುತ್ತಿವೆ, ಆದ್ದರಿಂದ ಪಕ್ಷದ ನಾಯಕತ್ವವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ” ಎಂದು ಬಿಆರ್‌ಎಸ್ ಪೋಸ್ಟ್ ಮಾಡಿದೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement