ದಸರಾ ಉದ್ಘಾಟನೆಗೆ ಬಾನು ಮುಷ್ತಾಕಗೆ ಆಹ್ವಾನ : ಹೈಕೋರ್ಟ್‌ ಮೆಟ್ಟಿಲೇರಿದ ಪ್ರತಾಪ ಸಿಂಹ

ಬೆಂಗಳೂರು : ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಬಾನು ಮುಷ್ತಾಕ್‌ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರತಾಪ ಸಿಂಹ ಸಲ್ಲಿಸಿದ್ದಾರೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ದಸರಾ ಹಬ್ಬವು ಹಿಂದೂಗಳ ಧಾರ್ಮಿಕ ಹಬ್ಬವಾಗಿದ್ದು, ನವರಾತ್ರಿಯ ಸಂದರ್ಭದಲ್ಲಿ ಆಚರಣೆ ಮಾಡಲಾಗುತ್ತದೆ. ಭಾನು ಮುಷ್ತಾಕ್‌ಗೆ ದಸರಾ ಉದ್ಘಾಟನೆ ಆಹ್ವಾನ ನೀಡಿರುವುದು ಸಾಂವಿಧಾನಿಕ ಹಕ್ಕುಗಳು ಮತ್ತು ಧಾರ್ಮಿಕ ಭಾವನೆಗಳ ಉಲ್ಲಂಘನೆಯಾಗಿದ್ದು, ಧಾರ್ಮಿಕ ಸಂಪ್ರದಾಯದ ಪಾವಿತ್ರ್ಯತೆಯನ್ನು ಕಾಪಾಡಬೇಕಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ದಸರಾ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ ಬಾನು ಮುಷ್ತಾಕ್‌ ಅವರು ಈ ಹಿಂದೆ ಹಿಂದೂ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ, ಭಾನು ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿಲುವು ಸಂವಿಧಾನದ 25 ಮತ್ತು 26ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಬಾನು ಅವರ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ಮೂಲಭೂತವಾಗಿ ವಿಭಿನ್ನವಾಗಿದ್ದರೂ ಅವರನ್ನು ದಸರಾಗೆ ಆಹ್ವಾನಿಸಲಾಗಿದೆ ಎಂದು ವಕೀಲೆ ನೇಹಾ ವೆಂಕಟೇಶ್‌ ಮೂಲಕ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಸೆಪ್ಟೆಂಬರ್‌ 3ರಂದು ಬಾನು ಮುಷ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತವು ಮೈಸೂರು ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement