ಬೆಳಗಾವಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮುಳುಗಿ ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಖಾನಾಪುರ ತಾಲೂಕು ನಂದಗಡ ಗ್ರಾಮದಲ್ಲೂ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ವ್ಯಕ್ತಿ ಒಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಮಾಡಿ ಹಿಂದಿರುಗುವಾಗ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಯಡೋಗ-ಚಾಪಗಾವಿ ನಡುವಿನ ಮಲಪ್ರಭಾ ನದಿ ಸೇತುವೆ ಬಳಿ ಘಟನೆ ನಡೆದಿದೆ ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement