ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳಿಗೂ ಗಾಯವಾಗಿದ್ದು, ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಈ ಅವಘಡದಲ್ಲಿ ಸಾವಿತ್ರಿ ಬಾಬು ಖರಾತ (28 ವರ್ಷ ) ಎಂಬ ಗರ್ಭಿಣಿ ಮಹಿಳೆ ಮರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಕ್ಕಳಾದ ಶ್ರಾವಣಿ ಖರಾತ (2.1 ವರ್ಷ),  ಘಾಟು ಲಕ್ಕು ಕೊಕರೆ (5.3 ವರ್ಷ) ಶಾಂಭವಿ ಖರಾತ (4 ವರ್ಷ), ಹಾಗೂ ಸ್ವಾತಿ ಬಾಬು ಖರಾತ್ (17 ವರ್ಷ) ಇವರಿಗೆ ಗಾಯಗಳಾಗಿವೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಒಯ್ಯಲಾಗಿದೆ. ಸಾನವಿ ಬಾಬು ಕೊಕರೆ (5.2 ವರ್ಷ), ವಿನಯ ಲಕ್ಕು ಖರಾತ (5.7 ವರ್ಷ), ಅನುಶ್ರೀ ಕೊಕರೆ (5 ವರ್ಷ) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಿರವತ್ತಿಯಲ್ಲಿ ಅಂಗನವಾಡಿ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಈ ದರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಸಿಪಿಐ ರಮೇಶ ಹಾನಾಪುರ ಹಾಗೂ ಪೊಲೀಸ್ ಸಿಬ್ಬಂದಿ, ಹೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement