ಕುಂದಾಪುರ : ಗೋಪಾಡಿ ಬೀಚಿನಲ್ಲಿ ಸಮುದ್ರ ಪಾಲಾದ ಬೆಂಗಳೂರಿನ ಮೂವರು ಯುವಕರು

ಉಡುಪಿ : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ ನಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ 9 ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಬೆಂಗಳೂರಿನ ಗೌತಮ(19), ಲೋಕೇಶ(19), ಆಶಿಶ್(18) ಎಂಬವರು ನೀರು ಪಾಲಾದವರು ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ನಿರೂಪ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ವಿವಿಧೆಡೆ ಕಾಲೇಜು ಓದುತ್ತಿದ್ದ 10 ಮಂದಿ ತಂಡವು ಸ್ನೇಹಿತನೊಬ್ಬನ ನೇತೃತ್ವದಲ್ಲಿ ಒಗ್ಗೂಡಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಬೀಚ್‌ಗೆ ಆಗಮಿಸಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ, ಪೊಲೀಸರು ಆಗಮಿಸಿದ್ದಾರೆ. ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ಶೋಧ ಕಾರ್ಯಾಚರಣೆ ನಡೆದು ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ.
ಭಾನುವಾರ ಮಧ್ಯಾಹ್ನ ಸುಮಾರು 1:30ರ ವೇಳೆಗೆ ಕೂಗಾಟ ಕೇಳಿ ಸ್ಥಳೀಯ ಮೀನುಗಾರ ಉಮೇಶ ಎಂಬವರು ಕಡಲ ಕಿನಾರೆಗೆ ಧಾವಿಸಿ ಬಂದಿದ್ದಾರೆ. ಕೆಲವು ವಿದ್ಯಾರ್ಥಿಗಳು ನೀರುಪಾಲಾಗುತ್ತಿರುವುದನ್ನು ನೋಡಿದ ಅವರು ತಕ್ಷಣ ನಿರೂಪ್‌ (20) ಹಾಗೂ ಇನ್ನೊಬ್ಬನನ್ನು ರಕ್ಷಣೆ ಮಾಡಿ ದಡಕ್ಕೆ ತಂದಿದ್ದಾರೆ ಬಳಿಕ ಸ್ಥಳೀಯರನ್ನು ಕರೆಸಿ ರಕ್ಷಣಾ ಕಾರ್ಯಕ್ಕೆ ಮುಂದಾದರೂ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement