ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್‌, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ…!

ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಸೆ.6ರಂದು ನಡೆಸಿದ್ದ ದಾಳಿ ವೇಳೆ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್‌ಗಳು, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿಗಳು, 24 ಕೋಟಿ ಮೌಲ್ಯದ 1 ಕೆಜಿ ಚಿನ್ನಾಭರಣಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ED) ತಿಳಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಡಿ ಮಾಹಿತಿ ಹಂಚಿಕೊಂಡಿದೆ. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಪಿಎಂಎಲ್‌ಎ ಕಾಯ್ದೆ 2002ರಡಿ ಇಡಿ ಚಳ್ಳಕೆರೆಯಲ್ಲಿ ಸೆ.6ರಂದು ದಾಳಿ ನಡೆಸಿತ್ತು.

ಈ ವೇಳೆ ವಶಕ್ಕೆ ಪಡೆದ ವಸ್ತುಗಳು ಸೇರಿ ಈವರೆಗೆ ಜಪ್ತಿ ಮಾಡಿರುವ ಒಟ್ಟಾರೆ ಸ್ವತ್ತುಗಳ ಮೌಲ್ಯ 100 ಕೋಟಿ ರೂ.ಗಳನ್ನು ಮೀರಿದೆ ಎಂದು ಇಡಿ ಹೇಳಿದೆ. ಹಾಗೂ , ಕಾರು ಎಷ್ಟು, ಚಿನ್ನ, ಬೆಳ್ಳಿ ಎಷ್ಟು ಸಿಕ್ಕಿದೆ ಎನ್ನುವ ಮಾಹಿತಿಯನ್ನು ಸಹ ಬಹಿರಂಗಪಡಿಸಿದೆ.
ದಾಳಿ ವೇಳೆ ಆನ್ ಲೈನ್ ಬೆಟ್ಟಿಂಗ್ ನಡೆಸಿರುವುದನ್ನು ಇಡಿ ಪತ್ತೆ ಹಚ್ಚಿದೆ. King567, Raja567, Lion567, Play567, Playwin567 ಎಂಬ ಆನ್ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದುದು ಕಂಡುಬಂದಿದೆ. ಈ ವೆಬ್‌ಸೈಟ್‌ಗಳ ಮೂಲಕ ಬಂದ ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವುದನ್ನು ಸಹ ಇಡಿ ಪತ್ತೆ ಮಾಡಿರುವುದಾಗಿ ಹೇಳಿದೆ. ದಾಳಿ ವೇಳೆ ವಿರೇಂದ್ರ ಪಪ್ಪಿ ಕುಟುಂಬ ಬಳಸುತ್ತಿದ್ದ ಲಕ್ಸುರಿ ಕಾರುಗಳನ್ನು ಸಹ ಇಡಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಬೇರೆ ವ್ಯಕ್ತಿಗಳು ಮತ್ತು ಸಂಸ್ಥೆಗಳ ಹೆಸರಿನಲ್ಲಿ ಕಾರು ನೋಂದಣಿ ಮಾಡಿರುವುದು ಪತ್ತೆಯಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement