ಭಟ್ಕಳ : ನೂರಾರು ಜಾನುವಾರುಗಳ ಮೂಳೆಗಳ ರಾಶಿ ಪತ್ತೆ..!

ಭಟ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿ ಮುಗ್ದೂಂ ಕಾಲೋನಿಯ ಗುಡ್ಡದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರಗಳು ರಾಶಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ.
ಪುರಸಭೆ ವ್ಯಾಪ್ತಿಯ ಮುಗ್ದೂಮ್ ಕಾಲೋನಿಯ ಗುಡ್ಡ ಪ್ರದೇಶದಲ್ಲಿ ನೂರಾರು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಹಾಗೂ ರಕ್ತದ ಕಲೆಗಳು ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ಇದುಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಜಾಗವು ಅರಣ್ಯ ಇಲಾಖೆಗೆ ಸೇರಿದೆ ಎಂದು ಹೇಳಲಾಗಿದೆ.
ಕಳೆದ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೆಲವರು ಮೂಳೆಗಳ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮುಗ್ದೂಮ್‌ ಕಾಲೋನಿಯ ಗುಡ್ಡದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಹತ್ಯೆ ನಡೆದರೂ ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಆಡಳಿತಕ್ಕೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ ಎಂದಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಯಂತ ನಾಯ್ಕ ಬೆಣಂದೂರು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement