ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟಿಗೆ ಮತ್ತೆರಡು ಪಿಐಎಲ್

ಬೆಂಗಳೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.
ಹಿಂದೂ ಧರ್ಮದವರಲ್ಲದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗ ಎಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು. ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಆಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ದಸರಾ ಉದ್ಘಾಟನೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು ಎಂದು ಕೋರಿ ಬೆಂಗಳೂರಿನ ನಿವಾಸಿ ಎಚ್ ಎಸ್ ಗೌರವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೆ, ಬೆಂಗಳೂರಿನ ಉದ್ಯಮಿ ಟಿ ಗಿರೀಶಕುಮಾರ ಹಾಗೂ ಅಭಿನವ ಭಾರತ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್ ಸೌಮ್ಯ ಅವರು ಸಹ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಈಗಾಗಲೇ ಇದೇ ವಿಷಯವಾಗಿ ಮಾಜಿ ಸಂಸದ ಪ್ರತಾಪ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಮೂರು ಅರ್ಜಿಗಳು ಸಲ್ಲಿಕೆಯಾದಂತಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement