ವೀಡಿಯೊ..| ಶಿರಸಿ ; ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಕೊಪ್ಪದಲ್ಲಿ ತಡರಾತ್ರಿ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ದೀರ್ಘ ಕಾರ್ಯಾಚರಣೆಯ ನಂತರ ರಕ್ಷಿಸಿದ್ದಾರೆ.
ಸ್ಥಳೀಯ ಸುರೇಶ ಹೆಗಡೆ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆ ಕಂಡ ಮನೆಯವರು ಒಂದು ಕ್ಷಣ ಗಾಬರಿಗೊಂಡಿದ್ದರು. ನಂತರ ಈ ವಿಷಯವನ್ನು ಅರಣ್ಯ ಇಲಾಖೆಯವರ ಗಮನಕ್ಕೆ ತಂದರು. ಭಾನುವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಸುಮಾರು ಐದು ತಾಸು ನಡೆದ ರಕ್ಷಣಾ ಕಾರ್ಯಾಚರಣೆ ನಡೆಯಿತು.

ದೀರ್ಘ ಕಾರ್ಯಾಚರಣೆಯ ನಂತರ ಚಿರತೆಯನ್ನು ರಕ್ಷಣೆ ಮಾಡಲಾಯಿತು. ಚಿರತೆಯನ್ನು ಸುರಕ್ಷಿತವಾಗಿ ಮೇಲೆತ್ತಿದ ನಂತರ ಅದನ್ನು ಕಾಡಿಗೆ ಬಿಡಲಾಯಿತು. ಇದು ಐದಾರು ವರ್ಷದ ಚಿರತೆಯಾಗಿರಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಡಿಎಫ್‌ಒ ಸಂದೀಪ ಸೂರ್ಯವಂಶಿ, ಎಸಿಎಫ್ ಎಸ್.ಎಸ್.ನಿಂಗಾಣಿ ಮಾರ್ಗದರ್ಶನ ನೀಡಿದರು. ವಲಯ ಅರಣ್ಯಾಧಿಕಾರಿ ಗಿರೀಶ ನಾಯ್ಕ, ಡಿಆರ್‌ಎಫ್‌ಒ ಐಶ್ವರ್ಯಾ ನಾಯ್ಕ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement