ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ; ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್​ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
ಈ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರತಾಪ ಸಿಂಹ, ಬೆಂಗಳೂರಿನ ಉದ್ಯಮಿ ಟಿ ಗಿರೀಶಕುಮಾರ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್ ಸೌಮ್ಯಾ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
“ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ ಅಥವಾ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಹೇಗೆ ವಿರುದ್ಧ ಎಂದು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದರಿಂದ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಮುಖ ಸುದ್ದಿ :-   ಕುಮಟಾ : ಕುಂಬೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement