ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಲ್ಲಿ (SBI Bank) ದರೋಡೆ (Robbery) ನಡೆದಿದೆ ಎಂದು ವರದಿಯಾಗಿದೆ.
ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಅವರನ್ನು ಕಟ್ಟಿಹಾಕಿ ದರೋಡೆ ಮಾಡಲಾಗಿದೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್ಗೆ 3 ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ದರೋಡೆ ಕೃತ್ಯ ಎಸಗಿದ್ದಾರೆ.
ಬ್ಯಾಂಕ್ನಲ್ಲಿ ಎಷ್ಟು ಹಣ ಕಳ್ಳತನದ ಆಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಆದರೆ ಅಂದಾಜು 8 ಕೋಟಿ ರೂ. ನಗದು ಹಣ ಹಾಗೂ ಸುಮಾರು 50 ಕೆಜಿಗೂ ಆಧಿಕ ಚಿನ್ನಾಭರಣ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರು ಬ್ಯಾಂಕ್ನ ಸಿಸಿ ಕ್ಯಾಮೆರಾ ಮತ್ತು ಹಾರ್ಡ್ ಡಿಸ್ಕ್ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಸಂಪರ್ಕಿಸುವ ಹಾಗೂ ಚಡಚಣದ ಇತರೆ ರಸ್ತೆಗಳಿಗೂ ಪೊಲೀಸರು ನಾಕಾ ಬಂದಿ ಹಾಕಿದ್ದಾರೆ.
ಹಣ ಮತ್ತು ಚಿನ್ನ ಕಳ್ಳತನವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಹಕರು ಎಸ್ಬಿಐ ಬ್ಯಾಂಕ್ ಎದುರು ಜಮಾವಣೆಯಾಗಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡೆಬೇಕಾಯಿತು.


ನಿಮ್ಮ ಕಾಮೆಂಟ್ ಬರೆಯಿರಿ