
ಭಾರತದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಬಹಾವಲ್ಪುರದ ತನ್ನ ಶಿಬಿರದಲ್ಲಿ ಸಂಭವಿಸಿದ ಹಾನಿಯನ್ನು ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಒಪ್ಪಿಕೊಂಡ ಕೆಲವು ದಿನಗಳ ನಂತರ, ಅದೇ ಭಯೋತ್ಪಾದಕ ಸಂಘಟನೆಯ ಕಮಾಂಡರ್‌ನ ಮತ್ತೊಂದು ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದರಲ್ಲಿ ಆತ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಭಾರತದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತನ್ನ ಉನ್ನತ ಅಧಿಕಾರಿಗಳಿಗೆ ಸಲಹೆ ನೀಡಿದ್ದರು ಎಂದು ಹೇಳುವುದನ್ನು ಕೇಳಬಹುದು.
ವೀಡಿಯೊದಲ್ಲಿ, ಭಾರತದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಗೌರವಿಸಬೇಕು ಎಂದು ದೇಶದ ಸೇನಾ ಮುಖ್ಯಸ್ಥರು ಹೇಳಿದ್ದಾರೆ ಎಂದು ಜೆಇಎಂ ಕಮಾಂಡರ್ ಇಲ್ಯಾಸ್ ಕಾಶ್ಮೀರಿ ಹೇಳಿದ್ದಾನೆ.

ಅದರಲ್ಲಿ ಆತ ಪಾಕಿಸ್ತಾನ ಸೇನೆ ಮತ್ತು ಅದರ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ಆಪರೇಷನ್ ಸಿಂಧೂರದಲ್ಲಿ ಕೊಲ್ಲಲ್ಪಟ್ಟವರ “ಅಂತ್ಯಕ್ರಿಯೆಗಳಿಗೆ ಸೇನೆ ಜನರಲ್‌ಗಳನ್ನು ಕಳುಹಿಸಿದ್ದಾರೆ” ಎಂದು ಎಂದು ಉಗ್ರ ಸಂಘಟನೆಯ ಕಮಾಂಡರ್ ಇಲ್ಯಾಸ್ ಕಾಶ್ಮೀರಿ ಹೇಳುವುದನ್ನು ಕೇಳಬಹುದು. ಈ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಹೊಸ ವಿವಾದ ಭುಗಿಲೆದ್ದಿದೆ.
ದಶಕಗಳಿಂದ, ಪಾಕಿಸ್ತಾನವು ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಗುಂಪುಗಳನ್ನು ಪ್ರಾಯೋಜಿಸುವುದನ್ನು ಅಧಿಕೃತವಾಗಿ ನಿರಾಕರಿಸುತ್ತ ಬಂದಿದೆ. ಆದರೂ 38 ನೇ ವಾರ್ಷಿಕ ಮಿಷನ್ ಮುಸ್ತಫಾ ಸಮ್ಮೇಳನದಲ್ಲಿ ಮಾತನಾಡಿದ ಕಾಶ್ಮೀರಿ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ್ ನೇತೃತ್ವದ ಪಾಕಿಸ್ತಾನದ ಮಿಲಿಟರಿಯು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಸಮಯದಲ್ಲಿ ಭಾರತದ ದಾಳಿಯಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಗಳಲ್ಲಿ ಭಾಗವಹಿಸಲು ಹಿರಿಯ ಅಧಿಕಾರಿಗಳನ್ನು ಕಳುಹಿಸಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿರುವುದು ಪಾಕಿಸ್ತಾನದ ಭಯೋತ್ಪಾದನೆಯ ನೆಲ ಎಂಬುದಕ್ಕೆ ಪುಷ್ಟಿ ನೀಡುತ್ತಿದೆ.
.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ನಾಗರಿಕರನ್ನು ಕೊಂದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಯಿತು.
ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರಬಲ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಮೇ 7 ರಂದು ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಚರಣೆಯನ ಭಾಗವಾಗಿ ಜೆಇಎಂ ಭಯೋತ್ಪಾದಕ ಗುಂಪಿನ ಭದ್ರಕೋಟೆಯಾದ ಬಹವಲ್ಪುರ್ ಸೇರಿದಂತೆ ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ