ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ಜಜ್ಜಿ ಹೋಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.
ಲಾರಿಯ ಮುಂಭಾಗ ಸಹ ಸಂಪೂರ್ಣ ನುಜ್ಜುಜುಜ್ಜಾಗಿದೆ. ಅಂಕೋಲಾ ಕೇಣಿ ಗ್ರಾಮದ ಭಾಸ್ಕರ ಗಾಂವ್ಕರ ಹಾಗೂ ಲಾರಿ ಚಾಲಕ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡ ಹತ್ತು ಜನರನ್ನು ಪ್ರಥಮ ಚಿಕಿತ್ಸೆಗಾಗಿ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಹಾಗೂ ಮಣಿಪಾಲಕ್ಕೆ ಒಯ್ಯಲಾಗಿದೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement