ಕರ್ನಾಟಕದಲ್ಲಿ ಎರಡು ದಿನ ಭರ್ಜರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವಡೆ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿ10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು, ಗುರುವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 19 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement