ಸೆಪ್ಟೆಂಬರ್‌ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ; ಅಧಿಕೃತ ಆದೇಶ ಬಾಕಿ

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ(KMF) ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಸೆ.22ರಿಂದ ನೂತನ ದರ ಜಾರಿಗೆ ಬರಲಿದೆ ಎನ್ನಲಾಗಿದ್ದು, ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ.
ಕೇಂದ್ರ ಸರ್ಕಾರ ಜಿಎಸ್​​ಟಿ ಇಳಿಕೆ ಮಾಡಿದ ಬೆನ್ನಲ್ಲೇ ದರ ಇಳಿಕೆಗೆ ಮುಂದಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದೆ.
ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬ ಬಗ್ಗೆ ನಿರ್ಧಾರ ಮಾಡಲಾಗಿದೆ ಎನ್ನಲಾಗಿದ್ದು, ಮೊಸರಿನ ದರ ಲೀಟರ್​ಗೆ 4 ರೂಪಾಯಿ ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಮಾಡಲು ನಿರ್ಧರಿಸಲಾಗಿದೆ. . ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಲಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಕೇಂದ್ರದ ನೂತನ ಜಿಎಸ್‌ಟಿ ಪದ್ಧತಿ ಸೆ. 22ರಿಂದ ಜಾರಿಗೆ ಬರಲಿದೆ. ಈಗ ಕೆಎಂಎಫ್ ದರ ಇಳಿಕೆಗೆ ಮುಂದಾಗಿದ್ದು, ಇದು ಕೂಡ ಸೆ. 22ರಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement