ಜಾತಿ ಗಣತಿ | ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ; ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಉಂಟಾಗಿದ್ದು, ಈ ಮಧ್ಯೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದಾರೆ. ಕ್ರೈಸ್ತ ಪದಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಗೊಳಿಸಿದ್ದನ್ನು ಕುರಿತಂತೆ ಮರುಪರಿಶೀಲಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ.
ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ (Caste Census) ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಮತ್ತು ಇತರರ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿತ್ತು.

ಜಾತಿಗಣತಿ ಕುರಿತು ಈ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜ್ಯಪಾಲ ಥಾವರಚಂದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ತನ್ನ ಅರಿವಿನ ಪ್ರಕಾರ, ರಾಜ್ಯದ ಜಾತಿಪಟ್ಟಿಯಲ್ಲಿ ಈ ಜಾತಿಗಳ ಹೆಸರು ಇಲ್ಲ. ಹೀಗಾಗಿ ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.
ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಸಾಮರ್ಸಯಕ್ಕೆ ಧಕ್ಕೆ ಉಂಟಾಗಬಹುದು. ಹೀಗಾಗಿ ಪಟ್ಟಿಯಲ್ಲಿನ ಜಾತಿಗಳ ದ್ವಿ ಗುರುತನ್ನು ಪಟ್ಟಿಯಿಂದ ಕೈಬಿಡುವ ಕುರಿತು ಪರಿಶೀಲಿಸುವುದು ಅಗತ್ಯವಾಗಿದೆ ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.
‘ಜಾತಿ ಜನಗಣತಿ’ ಎಂದು ಕರೆಯಲ್ಪಡುವ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ನಡುವೆ ನಡೆಯಲಿದ್ದು ದತ್ತಾಂಶ ಸಂಗ್ರಹದಲ್ಲಿ ಅಂದಾಜು 60 ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement