ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ  ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 23 ರವರೆಗೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ (ಗಂಟೆಗೆ 30-40 ಕಿಮೀ ವೇಗ) ಮತ್ತು ಗುಡುಗು ಸಹಿತ ಮಳೆ ಇರಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ಶಿವಮೊಗ್ಗ, ವಿಜಯನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement