ಬೆಳಗಾವಿ : ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲಿನಲ್ಲಿಯೇ ಅತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಿತ್ರಾ ಗೋಕಾಕ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ. ಈಕೆ ನರ್ಸಿಂಗ್‌ ಓದುತ್ತಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಹಪಾಠಿಗಳು ಕೊಠಡಿಗೆ ಬಂದು ಬಾಗಿಲು ಬಡಿದರೂ ಸುಮಿತ್ರಾ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಈ ಬಗ್ಗೆ ಹಾಸ್ಟೆಲ್‌ ಸಿಬ್ಬಂದಿ ಬಂದು ಪರಿಶಿಲನೆ ನಡೆಸಿದಾಗ ಕೊಠಡಿಯಲ್ಲಿ ಸುಮಿತ್ರಾ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement