ಮೈಸೂರು ದಸರಾ 2025 ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10:10 ರಿಂದ 10:40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು.
ಮೈಸೂರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ, ವೇದ ಮಂತ್ರಗಳ ಪಠಣದ ನಡುವೆ, ಮೈಸೂರು ಮತ್ತು ಅದರ ರಾಜಮನೆತನದ ದೇವತೆ ಚಾಮುಂಡೇಶ್ವರಿ ವಿಗ್ರಹದ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ.
‘ನಾಡ ಹಬ್ಬ’ ಎಂದು ಆಚರಿಸಲಾಗುವ 11 ದಿನಗಳ ದಸರಾ ಅಥವಾ ‘ಶರನ್ನವರಾತ್ರ’ ಉತ್ಸವದ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಚಿವ ಸಂಪುಟದ ಹಲವು ಸಚಿವರು, ಮೈಸೂರು ಭಾಗದ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಬಾನು ಮುಷ್ತಾಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ದಸರಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಸಾಹಿತಿ ಬಾನು ಮುಷ್ತಾಕ್‌ ಅವರು, ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಲ್ಲ, ಅದು ಮೌಲ್ಯ. ಅದನ್ನು ಗೌರವಿಸೋಣ. ಏಕತೆ ಮತ್ತು ಸಮಗ್ರತೆ ಈ ಭೂಮಿಯ ಸುಗಂಧವಾಗಲಿ. ಚಾಮುಂಡೇಶ್ವರಿ ದೇವಿಯ ಆಶೀರ್ವಾದಗಳು ನಮಗೆ ಮಾರ್ಗದರ್ಶನ ನೀಡಲಿ. ಅವರ ಶಕ್ತಿ, ಪ್ರೀತಿ ಮತ್ತು ಧೈರ್ಯವು ನಮ್ಮೊಳಗಿನ ದ್ವೇಷ ಮತ್ತು ಅಸಹಿಷ್ಣುತೆಯನ್ನು ಜಯಿಸಲು ನಮಗೆ ಸಹಾಯ ಮಾಡಲಿ ಎಂದು ಹೇಳಿದ್ದಾರೆ.
ದೇವಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ. ಸರ್ವ ಜನಾಂಗದ ತೋಟವಾದ ನಾಡಿನಲ್ಲಿ ಪ್ರತಿ ಹೂ ತನ್ನ ಬಣ್ಣದಲ್ಲೇ ಅರಳಲಿ, ತನ್ನ ಸುವಾಸನೆಯನ್ನೇ ಬೀರಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ ಎಲ್ಲವೂ ಒಟ್ಟಾದಾಗ ಸೌಹಾರ್ದದ ಹಾಡಾಗಲಿ’ ಎಂದು ಆಶಿಸಿದರು.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ನಮ್ಮ ಸಂಸ್ಕೃತಿ ನಮ್ಮ ಬೇರು, ಸೌಹಾರ್ದ ನಮ್ಮ ಶಕ್ತಿ, ಆರ್ಥಿಕತೆಯೇ ನಮ್ಮ ರೆಕ್ಕೆ, ವಿಶ್ವಕ್ಕೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ ಎಂದು ಹೇಳಿದರು.
ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲು ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಹಾಗೂ ಸಮಾಜದ ಕೆಲವು ವರ್ಗಗಳಿಂದ ಆಕ್ಷೇಪಣೆಗಳು ವ್ಯಕ್ತವಾದವು, ವಿವಾದದ ನಡುವೆಯೇ ಉದ್ಘಾಟನೆ ನಡೆಯಿತು. ದಸರಾ ಉದ್ಘಾಟನೆಗೆ ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್‌, ನಂತರ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement