ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಕುಟುಂಬವು ಭಾನುವಾರ ರಾತ್ರಿ ಮುರ್ಡೇಶ್ವರಕ್ಕೆ ಬಂದು ತಂಗಿತ್ತು ಎಂದು ಹೇಳಲಾಗಿದೆ. ಸೋಮವಾರ ದೇವಸ್ಥಾನದ ಎಡಬದಿಯ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದಾಗ ಭಾರೀ ಅಲೆ ಬಂದು ಅಪ್ಪಳಿಸಿತ್ತು.  ಸಮುದ್ರಲ್ಲಿ ಆಟವಾಡುತ್ತಿದ್ದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇಬ್ಬರು ಕೊಚ್ಚಿ ಹೋಗಿದ್ದರು. ಮೂವರನ್ನು ರಕ್ಷಿಸಲಾಗಿದೆ.  ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ   ಎನ್ನಲಾಗಿದೆ.

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement