ಕುಮಟಾ | ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ; ಸುಪ್ರಿಯಾ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

ಕುಮಟಾ: ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದ ಉತ್ತರ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಯು ಅಂಕೋಲಾದ ಶಟಗೇರಿಯ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು.
ಕುಮಟಾದ ಡಾ. ಎ.ವಿ. ಬಾಳಿಗಾ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುಪ್ರಿಯಾ ಗೌಡ 400 ಮೀ, 200 ಮೀ, ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿಗೆ ಕೀರ್ತಿ ತಂದ ಸುಪ್ರಿಯ ಗೌಡ ಅವರನ್ನು ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷ ಹನುಮಂತ ಶಾನಭಾಗ, ಕಾರ್ಯದರ್ಶಿ ವೈವಿ ಶಾನಭಾಗ, ಪ್ರಾಚಾರ್ಯರಾದ ನಿರ್ಮಲಾ ಪ್ರಭು, ಕಾಲೇಜಿನ ಕ್ರೀಡಾ ಕಾರ್ಯಾಧ್ಯಕ್ಷ ಪ್ರೊ.ಅನ್ನಪೂರ್ಣ ನಾಯ್ಕ, ದೈಹಿಕ ಶಿಕ್ಷಕ ಡಾ.ಶ್ರೀನಿವಾಸ, ತರಬೇತಿದಾರರಾದ ಕಮಲಾ ಬಾಳಿಗ ಶಿಕ್ಷಣ ಸಂಸ್ಥೆಯ ಪ್ರೊ. ಜಿ.ಡಿ. ಭಟ್ಟ ಅವರು ಅಭಿನಂದಿಸಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement