ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ 8 ವಿದ್ಯಾರ್ಥಿಗಳು ಕಾನೂರು ಜಲಪಾತಕ್ಕೆ ಬಂದಿದ್ದರು ಎಂದು ಹೇಳಲಾಗಿದೆ. ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳುವಾಗ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ