ಸಾಹಿತಿ ಎಸ್‌.ಎಲ್‌.ಭೈರಪ್ಪ ನಿಧನ ; ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾಳೆ, ಗುರುವಾರ (ಸೆಪ್ಟೆಂಬರ್‌ 25) ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ನಾಳೆ ಗುರುವಾರ ಬೆಳಿಗ್ಗೆ 8 ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಕುಟುಂಬದವರು ವಿನಂತಿಸಿದ್ದಾರೆ. ಗುರುವಾರ ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಒಯ್ಯಲಾಗುತ್ತದೆ. ಮೈಸೂರಿನಲ್ಲಿಯೂ ಸಾರ್ವಜನಿಕ ದರ್ಶನ ವ್ಯವಸ್ಥೆ ಇರುತ್ತದೆ. ಭೈರಪ್ಪ ಅವರ ಹಿರಿಯ ಮಗ ಲಂಡನ್‌ನಲ್ಲಿರುವುದರಿಂದ ಅವರು ಭಾರತಕ್ಕೆ ಬಂದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement