ಪಹಲ್ಗಾಮ್‌ ಭಯೋತ್ಪಾದಕ ದಾಳಿ : ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯ ಬಂಧನ

ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಉಗ್ರರಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಿಗೆ ಲಾಜಿಸ್ಟಿಕಲ್ ಬೆಂಬಲ ನೀಡುವಲ್ಲಿ ಕಟಾರಿ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆರೋಪಿ ಮೊಹಮ್ಮದ್ ಯೂಸುಫ್ ಕಟಾರಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟಾರಿ ಒಬ್ಬ ಶಿಕ್ಷಕನಾಗಿದ್ದರೂ ಕುಲ್ಗಾಮ್‌ನಲ್ಲಿ ಓವರ್ ಗ್ರೌಂಡ್ ವರ್ಕರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನೊಂದಿಗೆ ಈತ ಸಂಪರ್ಕ ಹೊಂದಿದ್ದಾನೆಂದು ನಂಬಲಾಗಿದೆ. ಆಪರೇಷನ್ ಮಹಾದೇವ ವೇಳೆ ಕೊಲ್ಲಲ್ಪಟ್ಟ ಎಲ್‌ಇಟಿ ಭಯೋತ್ಪಾದಕರಿಂದ ವಶಪಡಿಸಿಕೊಂಡ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳ ವಿಶ್ಲೇಷಣೆಯ ನಂತರ ಕಟಾರಿಯನ್ನು ಬಂಧಿಸಲಾಯಿತು.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಬಣವಾದ ದಿ ರೆಸಿಸ್ಟೆನ್ಸ್‌ ಫ್ರಂಟ್‌ ಪಹಲ್ಗಾಮ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಶ್ರೀನಗರ ಬಳಿಯ ಡಚಿಗಮ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮೇ 22 ರಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಅದರ ಬೆನ್ನಲ್ಲೇ ಆಪರೇಷನ್ ಮಹಾದೇವ ನಡೆಸಲಾಗಿತ್ತು.

ಪ್ರಮುಖ ಸುದ್ದಿ :-   ಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement