ಶಿರಸಿ : ಕೆಡಿಸಿಸಿ ಬ್ಯಾಂಕ್‌ ಚುನಾವಣೆ ದಿನಾಂಕ ಘೋಷಣೆ

ಶಿರಸಿ: ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಗುರುವಾರ (ಸೆಪ್ಟೆಂಬರ್‌ 25) ಪ್ರಕಟಿಸಲಾಗಿದೆ.
ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 25 ರಂದು ಮತದಾನ ನಡೆಯಲಿದೆ. ಚುನಾವಣೆ ಅಭ್ಯರ್ಥಿಗಳಿಗೆ ಅಕ್ಟೋಬರ್ 13 ರಿಂದ 17ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಕ್ಟೋಬರ್ 18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅದೇ ದಿನ ಚುನಾವಣಾ ಚಿಹ್ನೆಯ ಹಂಚಿಕೆ ನಡೆಯಲಿದೆ.
ಅಕ್ಟೋಬರ್ 25 ರಂದು ಮತದಾನ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ನಡೆದ ದಿನವೇ ಫಲಿತಾಂಶವೂ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ, ಸಹಕಾರಿ ಅಧಿಕಾರಿ ಅಜಿತ್ ಶಿರಹಟ್ಟಿ ಹಾಗೂ ಕಂದಾಯ ಅಧಿಕಾರಿ ಡಿ.ಆರ್.ಬೆಳ್ಳಿಮನೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement