ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜಕುಮಾರ ಘೋಷಣೆ

ಶಿವಮೊಗ್ಗ : ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜಕುಮಾರ ಘೋಷಿಸಿದ್ದಾರೆ.
ಇಂದು, ಶನಿವಾರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜಕುಮಾರ (Geetha Shivarajkumar) ಇನ್ಮುಂದೆ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ ಎಂದು ಹೇಳಿದ್ದಾರೆ.
ನಾನು ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ. ಆದರೆ ನಿಮ್ಮೆಲ್ಲರ ಜೊತೆ ನಿಲ್ಲುತ್ತೇನೆ. ನೀವು ಕರೆದಾಗ ಬರುತ್ತೇನೆ, ಮುಂದಿನ ಚುನಾವಣೆಗೆ ಬಂದು ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆ ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement