ಹೊಸಪೇಟೆ : ಅಡುಗೆ ಅನಿಲ ಸಿಲಿಂಡರ್ ಸ್ಫೋಟ, 8 ಮಂದಿಗೆ ಗಾಯ

ಹೊಸಪೇಟೆ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು, ಶನಿವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಬೆಳಗ್ಗಿನ ಜಾವ ಮನೆಯಲ್ಲಿ ಎಲ್ಲರೂ ಮಲಗಿರುವಾಗ ಈ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಕವಿತಾ, ಹಾಲಪ್ಪ, ಮೈಲಾರಪ್ಪ, ಗಂಗಮ್ಮ, ಮಲ್ಲಮ್ಮ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಹೊಸಪೇಟೆ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದು. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಸ್ಟವ್‌ ಉರಿಸಲು ಕವಿತಾ ಅವರು ಹೋದಾಗ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.
ವಿಷಯ ತಿಳಿದ ತಕ್ಷಣ ಹೊಸಪೇಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿದ್ದು, ಗಾಯಾಳುಗಳನ್ನು ತೋರಣಗಲ್ಲು ಆಸ್ಪತ್ರೆಗೆ ಸೇರಿಸಿದ್ದಾರೆ.

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement