ಬೆಳಗಾವಿ : ಹೆದ್ದಾರಿಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿ ಇನ್ನೊಂದು ಬದಿಯಲ್ಲಿ ಹೊರಟಿದ್ದ ಇನೋವಾ ಕಾರಿನ ಮೇಲೆ ಮುಗುಚಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು, ಇತರ ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ನಿಪ್ಪಾಣಿ ಕಡೆಯಿಂದ ಸಂಕೇಶ್ವರ ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿಯು ಬೆಳಗಾವಿ ಕಡೆಯಿಂದ ನಿಪ್ಪಾಣಿ ಕಡೆಗೆ ತೆರಳುತ್ತಿದ್ದ ಇನೋವಾ ವಾಹನದ ಮೇಲೆ ಮಗುಚಿಬಿದ್ದಿದೆ. ಪರಿಣಾಮ ಇನೋವಾ ವಾಹನದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಸಾತಾರಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ