ಕುಪ್ವಾರಾ : ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ನುಸುಳುಕೋರರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.
ಆರಂಭದಲ್ಲಿ ಅಡಗು ತಾಣದಲ್ಲಿದ್ದ ಭಯೋತ್ಪಾದಕರು ಭದ್ರತಾಪಡೆಗಳ ಮೇಲೆ ಆಕ್ರಮಣ ನಡೆಸಿದರು. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಭಯೋತ್ಪಾದಕರು ಹತರಾದರು. ಅವರ ಶವವನ್ನು ವಶಕ್ಕೆ ಪಡೆದುಕೊಳ್ಳಬೇಕಿದೆ. ಸ್ಥಳಕ್ಕೆ ಭಯೋತ್ಪಾದನೆ ನಿಗ್ರಹ ದಳ ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ...ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು...!

ನಿಮ್ಮ ಕಾಮೆಂಟ್ ಬರೆಯಿರಿ

advertisement