ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು ಪತ್ನಿ ಮಾಲತಿ, ಪುತ್ರಿಯನ್ನು ಅಗಲಿದ್ದಾರೆ. ಅವರಿಗೆ 61ವರ್ಷ ವಯಸ್ಸಾಗಿತ್ತು.
ಯಶವಂತ ಸರದೇಶಪಾಂಡೆ ಅವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ(1965) ಜನಿಸಿದರು. ತಂದೆ ಶ್ರೀಧರರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವೀಧ ಪಡೆದಿದ್ದರು. ನ್ಯೂಯಾರ್ಕ್ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದರು.
ರಂಗಭೂಮಿಯಲ್ಲಿ ಅಪಾರ ಖ್ಯಾತಿಗಳಿಸಿದ್ದರು. ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸಿ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಪ್ರದರ್ಶಿಸಿದ್ದರು. ಆಲ್ ದಿ ಬೆಸ್ಟ್ ನಾಟಕ, ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಸಹೀ ರಿ ಸಹೀ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದರು, ನಿರ್ದೇಶಿಸಿದ್ದರು.
ರಾಶಿಚಕ್ರ ಏಕವ್ಯಕ್ತಿ ನಾಟಕ ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದಿದ್ದರು.
ಹಲವಾರು ಕನ್ನಡ ಸಿನೆಮಾದಲ್ಲಿಯೂ ನಟಿಸಿದ್ದರು. ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ನಟಿಸಿದ್ದರು. ಹಲವಕ್ಕೆ ಸಂಭಾಷಣೆ ಬರೆದಿದ್ದರು. ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಸಹಿ ರೀ ಸಹಿ (ಮೂಲ:ಮರಾಠಿ) ಕಾಲಚಕ್ರ ಐಡಿಯಾ ಮಾಡ್ಯಾರ ಎಂಬ ಚಲನಚಿತ್ರ ನಿರ್ಮಾಣ, ರಾಮ ಶ್ಯಾಮ ಭಾಮ ಎಂಬ ಚಲನಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ