ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರಗುಳಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಸಂಜು ಸ್ಯಾಮ್ಸನ್ ಅವರ ಬದಲು ಧ್ರುವ್ ಜುರೆಲ್ ಅವರನ್ನು ಮೂರು ಏಕದಿನ ಪಂದ್ಯಗಳಿಗೆ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ ಮತ್ತು 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ನಿರ್ಲಕ್ಷಿಸಲ್ಪಟ್ಟ ನಂತರ ಯಶಸ್ವಿ ಜೈಸ್ವಾಲ್ ಮತ್ತು ಮೊಹಮ್ಮದ್ ಸಿರಾಜ್ ಏಕದಿನ ತಂಡಕ್ಕೆ ಮರಳಿದ್ದಾರೆ.
ಪಾಂಡ್ಯ ಬದಲಿಗೆ, ನಿತೀಶಕುಮಾರ ರೆಡ್ಡಿ ಭಾರತದ ಆಲ್ರೌಂಡರ್ ಆಗಿರುತ್ತಾರೆ. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ತಂಡದ ಭಾಗವಾಗಿದ್ದ 10 ಆಟಗಾರರು ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ ಪಟೇಲ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶಕುಮಾರ ರೆಡ್ಡಿ, ವಾಷಿಂಗ್ಟನ್ ಸುಂದರ, ಕುಲದೀಪ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್
T20I ತಂಡದಲ್ಲಿ, ಏಷ್ಯಾ ಕಪ್ 2025 ವಿಜೇತ ತಂಡದಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸದ ಏಕೈಕ ಸದಸ್ಯ ಪಾಂಡ್ಯ. ಅವರ ಸ್ಥಾನಕ್ಕೆ ನಿತೀಶ್ ರೆಡ್ಡಿ ಆಯ್ಕೆಯಾಗಿದ್ದು, ವಾಷಿಂಗ್ಟನ್ ಸುಂದರ್ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಭಾರತದ T20I ತಂಡ: ಸೂರ್ಯಕುಮಾರ ಯಾದವ್ (ನಾಯಕ), ಅಭಿಷೇಕ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ ವರ್ಮಾ, ನಿತೀಶಕುಮಾರ ರೆಡ್ಡಿ, ಶಿವಂ ದುಬೆ, ಅಕ್ಷರ ಪಟೇಲ್, ಜಿತೇಶ ಶರ್ಮಾ (ವಿಕೆಟ್‌ ಕೀಪರ್‌), ವರುಣ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ, ಅರ್ಷದೀಪ್ ಸಿಂಗ್, ಕುಲದೀಪ ಯಾದವ್, ಸಂಜು ಸ್ಯಾಮ್ಸನ್‌, ವಾಷಿಂಗ್ಟನ್ ಸುಂದರ

ಪ್ರಮುಖ ಸುದ್ದಿ :-   ನೌಕಾಪಡೆಗೆ ಐಎನ್ಎಸ್ ನಿಪುಣ್ ಸೇರ್ಪಡೆ : ಭಾರತಕ್ಕೆ ಈ ಆಳ ಸಮುದ್ರ ಡೈವಿಂಗ್ ಹಡಗುಗಳು ಏಕೆ ಬೇಕು? ಇದರ ವಿಶೇಷತೆ ಏನು?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement