ಬೆಳಗಾವಿ : ಒಂದೇ ದಿನ ಸಹೋದರರಿಬ್ಬರು ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (24) ಕುಸಿದು ಬಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ ಬಾಗನ್ನವರ ಸಾವಿನ ಸುದ್ದಿ ಬಂತು. ಸುದ್ದಿ ಕೇಳಿದ ತಕ್ಷಣ ಬಸವರಾಜ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿ  ಸಹ ಕುಸಿದು ಬಿದ್ದಿದ್ದಾರೆ. ಎನ್ನಲಾಗಿದೆ. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೊಳಗಾಗಿದ್ದಾರೆ. ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement