ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ.
ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವನಾ ದಿನಾಂಕವನ್ನು ಪ್ರಕಟಿಸಿದ ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ಅವರು, ಒಟ್ಟು 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು 7.43 ಕೋಟಿ ಮತದಾರರು ಮತದಾನಕ್ಕೆ ಅರ್ಹರಿದ್ದಾರೆ ಎಂದು ತಿಳಿಸಿದರು. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ನವೆಂಬರ್‌ 6ರಂದು 121 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್‌ 11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 10ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಕ್ಟೋಬರ್‌ 17ರಂದು ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿದ್ದು, ಅ.18ರಂದು ಚುನಾವಣಾ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಸಲಾಗುವುತ್ತದೆ. ಅಕ್ಟೋಬರ್‌ 20ರಂದು ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ಬಿಹಾರದ ಚುನಾವಣಾ ಕದನದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನೇತೃತ್ವದ ‘ಮಹಾಘಟಬಂಧನ’ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದೆ – ಬಿಜೆಪಿ 80, ಜೆಡಿ (ಯು) 45, ಎಚ್‌ಎಎಂ (ಎಸ್) 4 ಮತ್ತು ಇಬ್ಬರು ಸ್ವತಂತ್ರರು. ವಿರೋಧ ಪಕ್ಷವು 111 ಸ್ಥಾನಗಳನ್ನು ಹೊಂದಿದೆ – ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ (ಎಂಎಲ್) 11, ಸಿಪಿಐ (ಎಂ) 2 ಮತ್ತು ಸಿಪಿಐ 2

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement