ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್‌ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ. ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಹೀಗಾಗಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್ 18ರ ವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 7 ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.
ನಿಷ್ಠ ದಿನವೊಂದಕ್ಕೆ 10-15 ಮನೆಗಳ ಸಮೀಕ್ಷೆ ಕಾರ್ಯ ನಡೆಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸಮೀಕ್ಷೆಯಲ್ಲಿ ಭಾಗವಹಿಸುವಂತಿಲ್ಲ. ಹೀಗಾಗಿ ರಜೆ ವಿಸ್ತರಣೆಯಿಂದ 12 ದಿನಗಳು ಸಿಗಲಿದ್ದು, ಅಕ್ಟೋಬರ್ 18ರೊಳಗೆ ಸಮೀಕ್ಷೆ ಪೂರ್ಣಗೊಳ್ಳಬೇಕು. ಸಮೀಕ್ಷೆಯಲ್ಲಿ ತೊಡಗಿಸಿಕೊಂಡ ಶಿಕ್ಷಕರಿಗೆ 8 ವರ್ಕೀಂಗ್ ರಜೆ, ಇತರ ಸರ್ಕಾರಿ ರಜೆಗಳು ಸಿಗಲಿವೆ. ಸಮೀಕ್ಷೆ ಕಾರ್ಯಕ್ಕೆ ಹಿಂದೇಟು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement