ಬೆಂಗಳೂರು: ಇನ್ನು ಮೂರು ದಿನ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಕ್ಟೋಬರ್ 10 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಎರಡು ದಿನ ಗುಡುಗು ಸಹಿತ ಹಗುರ ಮಳೆಯಾಗಲಿದೆ.
ಅಕ್ಟೋಬರ್ 9ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮಾಂತರ), ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ನಗರ), ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ