ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಬಚ್ಚಿಟ್ಟು ಪತಿ ನಾಪತ್ತೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು ,ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.
ಸಾಕ್ಷಿ ಆಕಾಶ ಕುಂಬಾರ (20) ಕೊಲೆಯಾದವರು ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದೆ ಆಕಾಶ ಜೊತೆಗೆ ಸಾಕ್ಷಿ ಮದುವೆಯಾಗಿತ್ತು. ಮದುವೆಯ ನಂತರ ತವರಿನಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಆಕೆಯ ಗಂಡ ಆಕಾಶ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಕೊಲೆ ಮಾಡಿ ಪತಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದ್ದು, ಊರಿಗೆ ಹೋಗಿದ್ದ ಅತ್ತೆ ಮರಳಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ಪೊಲೀಸರ ಹಾಗೂ ಗೋಕಾಕ ಡಿವೈಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ ಗುಡಮೆ ಭೇಟಿ ನೀಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ನಿಮ್ಮ ಕಾಮೆಂಟ್ ಬರೆಯಿರಿ