ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಶರಣಗೌಡ ಕಂದಕೂರು ಉಪಸ್ಥಿತರಿದ್ದರು

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement