ಶಿರಸಿ: ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿ 1974 ರಿಂದ ನಡೆದು ಬಂದ ದಾರಿಯ ಸಮಗ್ರವಾದ ಮಾಹಿತಿ ಇರುವ ಸುವರ್ಣ ಪಥ ಸ್ಮರಣ ಸಂಚಿಕೆಯನ್ನು ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು.
ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹಾಗೂ ಸ್ಕೊಡವೇಸ್ ಮುಖ್ಯ ಕಾರ್ಯನಿರ್ವಾಹಕರಾದ ಡಾ.ವೆಂಕಟೇಶ ನಾಯ್ಕ ಅವರು ಸುವರ್ಣ ಪಥ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಶ್ರೀನಿವಾಸ್ ಹೆಬ್ಬಾರ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಪತ್ರಕರ್ತರು ಇಂದು ರಾಜ್ಯದ ಮತ್ತು ದೇಶದ ಅನೇಕ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಉನ್ನತ ಸ್ಥಾನದಲ್ಲಿ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅವರು ಕೆಲಸದ ಮೂಲಕ ಗಮನಸೆಳೆಯುತ್ತಿದ್ದಾರೆ ಎಂದು ಹೇಳಿದರು.
ಸ್ಕೋಡ್‌ವೇಸ್‌ನ ಡಾ. ವೆಂಕಟೇಶ ನಾಯ್ಕ ಮಾತನಾಡಿ, ಪತ್ರಕರ್ತರಿಗೆ ವೈಯಕ್ತಿಕವಾಗಿ ಹಲವು ಸಮಸ್ಯಗಳಿದ್ದರೂ ಅವುಗಳನ್ನು ಬದಿಗೊತ್ತಿ ನಿಷ್ಠೆಯಿಂದ ಕೆಲಸ ಮಾಡಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಮಂಗಲಾ ಹೊನ್ನೆಕೊಪ್ಪ ಕಾರ್ಯಕ್ರಮ ನಿರ್ವಹಿಸಿದರು. ನರಸಿಂಹ ಸಾತೊಡ್ಡಿ ವಂದಿಸಿದರು. ಜಿಲ್ಲಾ ಕಾರ್ಯನಿರತ ಸಂಘದ ಉಪಾಧ್ಯಕ್ಷ ವಿಠ್ಠಲದಾಸ ಕಾಮತ್ ಮೊದಲಾದವರು ಇದ್ದರು.


ನಿಮ್ಮ ಕಾಮೆಂಟ್ ಬರೆಯಿರಿ