ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2025 – 28ನೇ ಸಾಲಿಗಾಗಿ ರಾಜ್ಯ ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ಘಟಕಗಳ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಇತರ ಹುದ್ದೆಗಳಿಗೆ ನವೆಂಬರ 9 ರಂದು ಚುನಾವಣೆ ನಡೆಯಲಿದೆ.
ಅಕ್ಟೋಬರ್ 13ರಂದು ಜಿಲ್ಲಾ ಪತ್ರಿಕಾ ಭವನಲ್ಲಿ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಯಿತು. ಅಕ್ಟೋಬರ 16 ರಂದು ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಕ್ಟೋಬರ 18 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಅಕ್ಟೋಬರ್ 19 ರಿಂದ ನಾಮಪತ್ರ ಸಲ್ಲಿಕೆ ಆರಂಭ, ಅಕ್ಟೋಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 28 ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 30 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ 9 ಭಾನುವಾರ ಮುಂಜಾನೆ 9 ರಿಂದ ಅಪರಾಹ್ನ 3ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಮಧ್ಯಾಹ್ನ 3 ರ ನಂತರ ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಅಶೋಕ ಹಾಸ್ಯಗಾರ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ