ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ.
(ಅಕ್ಟೋಬರ್‌ 14ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.
ಅಕ್ಟೊಬರ್‌ 14ರಂದು ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಅಕ್ಟೋಬರ್‌ 15ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿ ವಿವಿಧ ಜಿಲ್ಲೆಗಳಲ್ಲಿಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್‌ 16ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement