
ಪಣಜಿ: ಗೋವಾದ ಕೃಷಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ಹಿರಿಯ ರಾಜಕಾರಣಿ ರವಿ ನಾಯ್ಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಕುಟುಂಬ ಮೂಲಗಳು ಪಿಟಿಐಗೆ ನೀಡಿರುವ ಮಾಹಿತಿಯ ಪ್ರಕಾರ, ಬುಧವಾರ ಮುಂಜಾನೆ ಪಣಜಿಯಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ಅವರಿಗೆ ಹೃದಯಾಘಾತವಾಯಿತು. ತಕ್ಷಣವೇ ಅವರನ್ನು ಪೊಂಡಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗಲಿಲ್ಲ.
ರವಿ ನಾಯ್ಕ ಅವರ ಪಾರ್ಥಿವ ಶರೀರವನ್ನು ನಂತರ ಪೊಂಡಾದ ಖಡ್ಪಬಂಧ್‌ನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಹಿರಿಯ ರಾಜಕಾರಣಿಗೆ ಅಂತಿಮ ನಮನ ಸಲ್ಲಿಸಲು ಅಪಾರ ಸಂಖ್ಯೆಯ ಜನರು ಅಲ್ಲಿ ಜಮಾಯಿಸಿದ್ದರು.
ಮೃತ ರವಿ ನಾಯ್ಕ ಅವರು ಪತ್ನಿ, ಇಬ್ಬರು ಪುತ್ರರು, ಸೊಸೆ ಮತ್ತು ಮೂವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ