ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರ

ನವದೆಹಲಿ : ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ (Bengaluru-Hubballi) ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ.
ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರೈಲು ಸಂಖ್ಯೆ: 20687 ಮತ್ತು 20688 SBC ಈ ಮಾರ್ಗದಲ್ಲಿ ನಿಯತಕಾಲಿಕವಾಗಿ ಸಂಚಾರ ಆರಂಭಿಸಲಿವೆ.

ಸೂಪರ್‌ ಫಾಸ್ಟ್‌ ರೈಲು ಹುಬ್ಬಳ್ಳಿ, ಕರ್ಜಗಿ, ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಯಶವಂತಪುರ ಮತ್ತು ಕೆಎಸ್‌ಆರ್‌ ಬೆಂಗಳೂರು ಮಧ್ಯೆ ಸಂಚರಿಸಲಿದೆ. ಇದರಿಂದ ರಾಜ್ಯದ ಏಳೆಂಟು ಜಿಲ್ಲೆಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೆಲವು ದಿನಗಳ ಹಿಂದೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು, ಸಚಿವ ಜೋಶಿ ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಮತ್ತೊಂದು ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement