ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾದಂತೆ ಕಾಣುತ್ತಿದೆ.

ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಂದರೆ ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕಾಗುತ್ತದೆ.
ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಚಟುವಟಿಕೆಗಳನ್ನು ಸರ್ಕಾರಿ ಆವರಣದಲ್ಲಿ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿದ್ದ ಪತ್ರದ ನಂತರ ಸರ್ಕಾರದಿಂದ ಈ ನಿರ್ಧಾರ ಬಂದಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, “ನಾವು ಸಾರ್ವಜನಿಕ ಸ್ಥಳಗಳು, ಸರ್ಕಾರಿ ಶಾಲೆಗಳು, ಕಾಲೇಜುಗಳು, ಸರ್ಕಾರಿ ಆವರಣಗಳು, ಸರ್ಕಾರಿ ಸ್ವಾಮ್ಯದ ಮತ್ತು ಅನುದಾನಿತ ಸಂಸ್ಥೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ತರಲು ಬಯಸಿದ್ದೇವೆ. ಈ ಮೊದಲು ಗೃಹ ಇಲಾಖೆ, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶಗಳನ್ನು ಒಗ್ಗೂಡಿಸಿ ಹೊಸ ನಿಯಮವನ್ನು ರೂಪಿಸಲಾಗುವುದು. ಮುಂದಿನ ಕೆಲ ದಿನಗಳಲ್ಲಿ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನೊಳಗೆ ಹೊಸ ನಿಯಮ ಜಾರಿಗೆ ಬರಲಿದೆ” ಎಂದು ತಿಳಿಸಿದರು.

ಸಚಿವ ಖರ್ಗೆ ಅವರ ಪ್ರಕಾರ, ಮುಂಬರುವ ನಿಯಮಗಳು ಶೈಕ್ಷಣಿಕ ಸಂಸ್ಥೆಗಳು ಕಲಿಕೆ ಮತ್ತು ಕಲ್ಯಾಣದ ಮೇಲೆ ಮಾತ್ರ ಗಮನಹರಿಸುವ ತಟಸ್ಥ ಸ್ಥಳಗಳಾಗಿ ಉಳಿಯುವುದನ್ನು ಖಚಿತಪಡಿಸುತ್ತವೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಏನು ಮಾಡಬೇಕಾಗಿದ್ದರೂ, ಸರ್ಕಾರದ ಅನುಮತಿ ಪಡೆದ ನಂತರವೇ ಮಾಡಬೇಕು” ಎಂದು ಅವರು ತಿಳಿಸಿದರು.
2013ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ ಆದೇಶವನ್ನೇ ಆಧಾರವಾಗಿಟ್ಟುಕೊಂಡು ಹಾಗೂ ತಮಿಳುನಾಡು ಸರ್ಕಾರದ ಆದೇಶವನ್ನೂ ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement