
ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ದೂರು ನೀಡಿದ್ದಾರೆ.
ಮಾಜಿ ಸಂಸದ ರಮೇಶ್ ಕತ್ತಿ ಅವರು ನಾಯಕ ಸಮುದಾಯದ ಬಗ್ಗೆ ಹೇಳಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿತ್ತು.

ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿ.ಕೆ ಮಾಡೆಲ್ ಶಾಲೆಯ ಆವರಣದಲ್ಲಿ ಅವರು ಅವಾಚ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಹೇಳಿಕೆ ತಿರುಚಲಾಗಿದೆ: ಕತ್ತಿ
ಈ ಬಗ್ಗೆ ಮಾಜಿ ಸಂಸದ ರಮೇಶ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ತನ್ನಿಂದಾಗಿ ಯಾರಿಗಯಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಡಿಸಿಸಿ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿಮಾನಿಗಳು ಡಾಲ್ಬಿ ಸಂಗೀತ ಹಚ್ಚಿ ಮೆರವಣಿಗೆ ಮಾಡಲು ಒತ್ತಾಯಿಸಿದರು. ಆ ವೇಳೆ ನಾನು ಬ್ಯಾಡರೋ (ಬೇಡ) ಎಂದು ಹೇಳಿದೆ. ಈ ಹೇಳಿಕೆ ತಿರುಚಿ ವೀಡಿಯೊ ವೈರಲ್ ಮಾಡಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದರಿಂದ ಯಾರಿಗಯಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ