ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ.
ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ. ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳುವುದಿಲ್ಲ. ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಳಸಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಮೂರು ದಿನ ರಜೆ
ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಮತ್ತೆ ಪ್ರಾರಂಭವಾಗಲಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಳಸಿ ಅಕ್ಟೋಬರ್ 23 ರಿಂದ 31 ರವರೆಗೆ ಸಮೀಕ್ಷೆ ಕಾರ್ಯವನ್ನ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯಾದ್ಯಂತ 95%ರಷ್ಟು ಸಮೀಕ್ಷೆ
ಗ್ರೇಟರ್ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಶೇಕಡ 95ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ರಾಮನಗರದಲ್ಲಿ ಶೇ.86%, ಬೀದರ ಜಿಲ್ಲೆಗಳಲ್ಲಿ ಶೇ 79.46% ಹಾಗೂ ಧಾರವಾಡದಲ್ಲಿ ಶೇ.88%ರಷ್ಟು ನಡೆದಿದ್ದು ಸಮೀಕ್ಷೆ ಕಾರ್ಯ ತುಸು ಕುಂಠಿತವಾಗಿದೆ.
ಬೆಂಗಳೂರಿನಲ್ಲಿ 45%ರಷ್ಟು ಸಮೀಕ್ಷೆ ಕಾರ್ಯ ನಡೆದಿದೆ. ಬೆಂಗಳೂರಿನಲ್ಲಿ ತಡವಾಗಿ ಸಮೀಕ್ಷೆ ಪ್ರಾರಂಭವಾದ ಕಾರಣ ಸಮೀಕ್ಷೆ ಪ್ರಮಾಣ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ನೂರರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದರು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement