ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮಳವಳ್ಳಿ ಮಾರ್ಗವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕೊಳ್ಳೆಗಾಲ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನಂತರ ಡಿಕ್ಕಿಯಾಗಿದ್ದ ಬಸ್‌ಗೆ ಮತ್ತೊಂದು ಬಸ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಮಾಲವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಹೆಚ್ಚಿನ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement