ವಾಯುಭಾರ ಕುಸಿತ : ಕರ್ನಾಟಕದ 23 ಜಿಲ್ಲೆಗಳಲ್ಲಿ 4-5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾನುವಾರ (ಅಕ್ಟೋಬರ್‌ ೧೯) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಹಲವೆಡೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (30-40 ಕಿಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​
ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ವಾಯುಭಾರ ಕುಸಿತದಿಂದಾಗಿ ಸಮುದ್ರ ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಿದೆ. ಅಕ್ಟೋಬರ್‌ 22ರಿಂದ 24ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇದೆ. ಅಕ್ಟೋಬರ್‌ 23ರಂದು ಕರಾವಳಿ ಕರ್ನಾಟಕದಲ್ಲಿ ಮಳೆಯಾಗಲಿದೆ. ಮುಂದಿನ 5 ದಿನಗಳಲ್ಲಿ ಈ ಪ್ರದೇಶದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ, ಕಲಬುರಗಿ, ರಾಯಚೂರು, ಯಾದಗಿರಿ, ಗದಗ,ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement