ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಐಶರ್ ಲಾರಿಯಲ್ಲಿ ಸುಮಾರು 10 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ನಿಲ್ಲಿಸದೇ ಮುಂದೆ ಸಾಗಿದ್ದಾರೆ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ವರೆಗೂ ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿದ್ದಾರೆ. ಆದರೂ ನಿಲ್ಲದ ಚಾಲಕ ಪೊಲೀಸರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪಿಎಸ್‌ಐ ಎರಡು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ಒಂದು ಗುಂಡು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ. ಘಟನೆಯ ಸಮಯದಲ್ಲಿ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ