ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಇಂದು, ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.
ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗಲಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕೀ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement